ಯಡಿಯೂರಪ್ಪಗೆ ಮತ್ತೆ ಸಂಕಷ್ಟ! ಭ್ರಷ್ಟಾಚಾರ ಆರೋಪದ ಮರುವಿಚಾರಣೆಗೆ ಆದೇಶ!

masthmagaa.com:

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಸಲ್ಲಿಕೆಯಾಗಿದ್ದ ಭ್ರಷ್ಟಾಚಾರ ಆರೋಪ ಪ್ರಕರಣವನ್ನ ಮರು ವಿಚಾರಣೆ ನಡೆಸುವಂತೆ ಹೈಕೋರ್ಟ್‌ ಆದೇಶಿಸಿದೆ. ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಅನ್ನೋರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿದ್ದ ಆದೇಶವನ್ನು ರದ್ದು ಮಾಡಿದ್ದು ಮತ್ತೆ ವಿಚಾರಣೆ ನಡೆಸೋದಕ್ಕೆ ಸೂಚಿಸಿದೆ.

-masthmagaa.com

Contact Us for Advertisement

Leave a Reply