ಹೃದಯಾಘಾತ ತಪ್ಪಿಸಲು ಪುನೀತ್‌ ರಾಜ್‌ಕುಮಾರ್‌ ಹೆಸರಲ್ಲಿ ಯೋಜನೆ!

masthmagaa.com:

ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನ ತಡೆದು ಸೂಕ್ತ ಚಿಕಿತ್ಸೆ ಒದಗಿಸಲು ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್ ಅವ್ರ ಹೆಸರಿನಲ್ಲಿ ಯೋಜನೆ ಒಂದನ್ನ ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಇತ್ತೀಚಿನ ದಿನಗಳಲ್ಲಿ ಚಿಕ್ಕವಯಸ್ಸಿನವರೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದು, ಇಂತಹ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಿಸಿ ಚಿಕಿತ್ಸೆ ನೀಡಲು ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ ಅಂತ ಹೇಳಿದ್ದಾರೆ. ಅಂದ್ಹಾಗೆ ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಣೆ ಮಾಡಿದ್ದು, ಅದರಂತೆ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply