ರಾಜ್ಯದ ಹಲವೆಡೆ ಇವತ್ತೂ ಮಳೆ: ಕೋಲಾರದಲ್ಲಿ ಹೆಚ್ಚಾದ ಮಳೆ!

masthmagaa.com:

ರಾಜ್ಯದ ಹಲವೆಡೆ ಇವತ್ತೂ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಹನುಮನ ಹಳ್ಳಿ ಅನ್ನೋ ಕಡೆ ಅತಿಹೆಚ್ಚು ಅಂದ್ರೆ 134.5 ಮಿಲಿ ಮೀಟರ್ ಮಳೆಯಾಗಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗೋ ಸಾಧ್ಯತೆ ಇದೆ ಅಂತ, ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply