ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

masthmagaa.com:
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೊಂದುಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ದೊರೆಸಾನಿಪಾಳ್ಯ ಎಂಬಲ್ಲಿ ಅತಿಹೆಚ್ಚು 9 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
-masthmagaa.com

Contact Us for Advertisement

Leave a Reply