ಇವತ್ತು ಎಲ್ಲೆಲ್ಲಿ ಮಳೆಯಾಯ್ತು..? ಏನೇನಾಯ್ತು..?

masthmagaa.com:

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಇವತ್ತು ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡುವಿನ ಅಲ್ಲಲ್ಲಿ ಮಧ್ಯಮ ಅಥವಾ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತಾನೂ ಹೇಳಿದೆ. ಇನ್ನು ಜುಲೈ 23ನೇ ತಾರೀಖಿನ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗೋ ಸಾಧ್ಯತೆ ಇದೆ. ಹೀಗಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 24ನೇ ತಾರೀಖಿನವರೆಗೂ ವ್ಯಾಪಕ ಮಳೆ ಮುಂದುವರಿಯಲಿದೆ ಅಂತ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಘಟಕ ಮುನ್ಸೂಚನೆ ನೀಡಿದೆ. ಮುಂಬೈನಲ್ಲಿ ಭಾರಿ ಮಳೆಯಾಗ್ತಿದ್ದು, ಮುಂದಿನ 24 ಗಂಟೆಗಳ ಕಾಲ ಜೋರು ಅಂದ್ರೆ ತುಂಬಾ ಜೋರು ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ. ಸದ್ಯ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರಾಖಂಡ್​​ನಲ್ಲಿ ಭಾರಿ ಮಳೆಯಿಂದಾಗಿ ತನಕ್​ಪುರ್ ಮತ್ತು ಘಾಟ್​​ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಇದ್ರಿಂದ ಸುತ್ತಮುತ್ತ 150ಕ್ಕೂ ಹೆಚ್ಚು ಮಂದಿ ಸಿಲುಕಿ ಪರದಾಡ್ತಿದ್ದಾರೆ.

-masthmagaa.com

Contact Us for Advertisement

Leave a Reply