masthmagaa.com:

ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟಿ ಸಂಜನಾ ಗಲ್ರಾನಿ ಕೊನೆಗೂ ರಿಲೀಫ್ ಸಿಕ್ಕಿದೆ. ಸಂಜನಾಗೆ ಕರ್ನಾಟಕ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ. ಅವರಿಗೆ ಗಂಭೀರ ಆರೋಗ್ಯ ಸಮಸ್ಯೆ ಇರೋ ಹಿನ್ನೆಲೆ ಜಾಮೀನು ಮಂಜೂರು ಮಾಡಲಾಗಿದೆ. 3 ಲಕ್ಷ ರೂಪಾಯಿಯ ವೈಯಕ್ತಿಕ ಬಾಂಡ್ ಕೊಡಬೇಕು, ತಿಂಗಳಿಗೆ ಎರಡು ಬಾರಿ ತಮ್ಮ ಹಾಜರಾತಿಯನ್ನ ದೃಢಪಡಿಸಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನ ಹಾಕಲಾಗಿದೆ. ಈ ಮೂಲಕ 3 ತಿಂಗಳ ಬಳಿಕ ಸಂಜನಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅಂದ್ಹಾಗೆ ಸೆಪ್ಟೆಂಬರ್ 8ರಂದು ಬೆಂಗಳೂರಿನ ಇಂದಿರಾನಗರದಲ್ಲಿರುವ ಸಂಜನಾ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ರು. ಬಳಿಕ ಅವರನ್ನ ವಶಕ್ಕೆ ಪಡೆದು ಅರೆಸ್ಟ್ ಮಾಡಲಾಗಿತ್ತು.

-masthmagaa.com

Contact Us for Advertisement

Leave a Reply