15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆಪಟ್ಟಿ ರದ್ದು! ಯಾಕೆ?

masthmagaa.com:

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿತ್ತು. ಆದ್ರೆ ಈಗ ಕರ್ನಾಟಕ ಹೈಕೋರ್ಟ್‌ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನ ರದ್ದು ಮಾಡಿ ಆದೇಶ ಹೊರಡಿಸಿದೆ. ಆಯ್ಕೆ ವೇಳೆ ಶಿಕ್ಷಣ ಇಲಾಖೆ ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣನೆಯನ್ನ ಪ್ರಶ್ನಿಸಲಾಗಿತ್ತು. ಇದರಿಂದ ಹಲವು ಅಭ್ಯರ್ಥಿಗಳನ್ನು ರಿಜೆಕ್ಟ್ ಮಾಡಲಾಗಿತ್ತು. ಇದನ್ನ ವಿರೋಧಿಸಿ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ರು, ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸ್ಬೇಕು ಅಂತ ಮನವಿ ಮಾಡಿದ್ರು. ಅರ್ಜಿ ವಿಚಾರಣೆ ನಡೆಸಿದ ಜಡ್ಜ್‌ ಎಂ. ನಾಗಪ್ರಸನ್ನ ಅವ್ರ ಏಕಸದಸ್ಯ ಪೀಠ, ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸೋಕೆ ಶಿಕ್ಷಣ‌ ಇಲಾಖೆಗೆ ಆದೇಶಿಸಿದೆ.

-masthmagaa.com

Contact Us for Advertisement

Leave a Reply