masthmagaa.com:

ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನು ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಇತ್ತೀಚೆಗೆ ಅವರ ಮನೆಗೆಲಸದವರಿಗೆ ಸೋಂಕು ದೃಢಪಟ್ಟಿತ್ತು. ಯಾವುದಕ್ಕೂ ತಾವು ಕೂಡ ಪರೀಕ್ಷೆ ಮಾಡಿಸಿಕೊಳ್ಳೋಣ ಅಂತ ಮುಂದಾದಾಗ ಸಚಿವರಿಗೂ ಸೋಂಕು ತಗುಲಿರೋದು ದೃಢಪಟ್ಟಿದೆ.

‘ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದೆ. ಆದ್ರೆ ಯಾವುದೇ ರೀತಿಯ ರೋಗ ಲಕ್ಷಣ ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ’ ಅಂತ ಸಚಿವರು ಟ್ವೀಟ್ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply