ಜೆಡಿಎಸ್‌-ಬಿಜೆಪಿ ಮೈತ್ರಿ! ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಿಷ್ಟು!

masthmagaa.com:

2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಾತಾಡಿರುವ ಇಬ್ರಾಹಿಂ, ದೆಹಲಿಗೆ ಹೋಗುವಾಗ ನನ್ನನ್ನು ಬಿಟ್ಟು ಹೋಗಿದ್ದಾರೆ. ಇದು ನನಗೆ ನೋವಾಗಿದೆ. ಇವರು ಬಿಜೆಪಿ ಹತ್ತಿರ ಹೋಗಿದ್ದು ತಪ್ಪು. ಅವರೇ ದೇವೇಗೌಡರ ಮನೆ ಬಳಿಗೆ ಬರಬೇಕಾಗಿತ್ತು. ಪಕ್ಷದ ಕಾರ್ಯಕರ್ತರ ಮುಂದೆ ತಲೆ ತಗ್ಗಿಸುವ ಪರಿಸ್ಥಿತಿ ಬಂದಿದೆ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ನಾನು ಪಕ್ಷದ ಅಧ್ಯಕ್ಷ, ನೀವು ದೆಹಲಿಗೆ ಹೋದ್ರಿ, ನನಗೆ ಒಂದು ಮಾತು ಹೇಳಿಲ್ಲ… ಏನು ಚರ್ಚೆ ಮಾಡಿದ್ದೀರಿ ಅನ್ನೋ ಬಗ್ಗೆ ಇದುವರೆಗೂ ನನಗೆ ಮಾಹಿತಿ ಬಂದಿಲ್ಲ. ಮೈತ್ರಿ ಎಲ್ಲಿ ಆಗಿದೆ? ನಾನು ಪಕ್ಷದ ಅಧ್ಯಕ್ಷ, ಪಕ್ಷದಲ್ಲಿ ಎಲ್ಲಿ ಚರ್ಚೆ ಆಗಿದೆ? ಅಂತ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ. ಇದೇ ವೇಳೆ “ನನಗೆ ಸ್ಥಾನ ಮುಖ್ಯ ಅಲ್ಲ, ಮಾನ ಮುಖ್ಯ. 60 ವರ್ಷದ ರಾಜಕೀಯದಲ್ಲಿ ಯಾವುದೇ ಕಳಂಕ ನನ್ನ ಮೇಲೆ ಇಲ್ಲ. ಮೈತ್ರಿ ಬೇಕಾಗಿಲ್ಲ ಅಂತ ಅವತ್ತು ದೇವೇಗೌಡರು ಹೇಳಿದ್ದರು. ದೇವೇಗೌಡರು ಹೋಗಿ ಮೈತ್ರಿ ಬಗ್ಗೆ ಮಾತಾಡಿಲ್ಲ, ಕುಮಾರಸ್ವಾಮಿ ಹೋಗುವಾಗ ನನಗೆ ತಿಳಿಸಿಲ್ಲ. ಜನತಾದಳ ಹಿಂದೂ ಪಕ್ಷವೂ ಅಲ್ಲ, ಮುಸ್ಲಿಂ ಪಕ್ಷವೂ ಅಲ್ಲ. ಜನತಾದಳ ಕನ್ನಡದ ಪಕ್ಷ” ಅಂತ ಇಬ್ರಾಹಿಂ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಅಕ್ಟೋಬರ್‌ 16 ರಂದು ನಾನು ಜನರ ಬಳಿ ಅಭಿಪ್ರಾಯ ಪಡೆದು ಬರ್ತೀನಿ.ಈ ಹಿನ್ನಲೆಯಲ್ಲಿ ಸಮಾನ ಮನಸ್ಕರ ಸಭೆ ಕರೆದಿದ್ದೇನೆ. ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ತೀನಿ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply