ಕರ್ನಾಟಕದ 6 ವಿಧಾನಪರಿಷತ್‌ ಸ್ಥಾನಗಳಿಗೆ ಮುಹೂರ್ತ ಫಿಕ್ಸ್‌!

masthmagaa.com:

ಲೋಕಸಭೆ ಎಲೆಕ್ಷನ್‌ಗೆ ಮತದಾನ ನಡಿತಿದ್ರೆ ಇತ್ತ ಕರ್ನಾಟಕದ 6 ವಿಧಾನಪರಿಷತ್‌ ಸ್ಥಾನಗಳಿಗೆ ಮುಹೂರ್ತ ಫಿಕ್ಸ್‌ ಆಗಿದೆ. ಪ್ರಮುಖವಾಗಿ 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇನ್ನು ಜೂನ್ 6ರಂದು ಫಲಿತಾಂಶ ಹೊರಬಿಳಲಿದೆ. ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ , ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊ‌ನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ.

-masthmagaa.com

Contact Us for Advertisement

Leave a Reply