ರಾಜ್ಯದ ಹವಾಮಾನ ವರದಿ ಹೇಗಿದೆ? ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:
ರಾಜ್ಯದ ಕೆಲವೊಂದುಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನ ಚಗಚಗೆರೆ ಎಂಬಲ್ಲಿ ಅತಿಹೆಚ್ಚು 123 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ, ಕೆಲವೊಂದುಕಡೆ ಭಾರೀ ಮಳೆಯಾಗೋ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೊಂದುಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
-masthmagaa.com

Contact Us for Advertisement

Leave a Reply