masthmagaa.com:

ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗದ ಅಲ್ಲಲ್ಲಿ ನವೆಂಬರ್ 12ರಿಂದ 14ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಘಟಕ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ನವೆಂಬರ್ 12 ಮತ್ತು 13ರಂದು ಮಳೆಯಾಗಬಹುದು. ಆದ್ರೆ ಉತ್ತರ ಒಳನಾಡಿನಲ್ಲಿ ನವೆಂಬರ್ 14ರವರೆಗೂ ಒಣಹವೆ ಮುಂದುವರಿಯಲಿದೆ ಅಂತ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಘಟಕದ ನಿರ್ದೇಶಕ ಸಿ.ಎಸ್​. ಪಾಟೀಲ್ ಹೇಳಿದ್ದಾರೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರದಲ್ಲೂ ಬೆಂಗಳೂರು ಮತ್ತು ದಕ್ಷಿಣ ಒಳನಾಡು ಪ್ರದೇಶದ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಕಾಣುತ್ತಿದೆ.

-masthmagaa.com

Contact Us for Advertisement

Leave a Reply