ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.. ಯೆಲ್ಲೋ ಅಲರ್ಟ್​ ಘೋಷಣೆ

masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇವತ್ತು ಮಳೆಯಾಗಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply