ಮುಂಗಾರು: ಇವತ್ತು ಎಲ್ಲೆಲ್ಲಿ ಮಳೆಯಾಗಿದೆ ನೋಡಿ!

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ಎಂಬಲ್ಲಿ ಅತಿಹೆಚ್ಚು 176 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಕೆಲವೊಂದು ಕಡೆ ಅಧಿಕ ಮಳೆ ಇನ್ನುಳಿದ ಕಡೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಹಲವು ಕಡೆ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಮತ್ತು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply