ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದಲ್ಲಿ ಇವತ್ತೂ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಎಂಬಲ್ಲಿ ಅತಿಹೆಚ್ಚುಅಂದ್ರೆ 220.5 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಅಧಿಕ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಪಕ್ಕದ ತಮಿಳುನಾಡು ಹಾಗೂ ಕೇರಳಕ್ಕೂ ಕೂಡ ಭಾರೀ ಮಳೆಯ ಮುನ್ಸೂಚನೆ ಇದ್ದು ಎರಡೂ ರಾಜ್ಯಗಳ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

-masthmagaa.com

Contact Us for Advertisement

Leave a Reply