ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ.. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!

masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಅತಿಹೆಚ್ಚು 115 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು – ಹೀಗೆ ರಾಜ್ಯದ ಬಹುತೇಕ ಕಡೆ ಕಡೆ ಸಾಧಾರಣ ಮಳೆ ಮತ್ತು ಕೆಲವೊಂದುಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 29ನೇ ತಾರೀಖಿನವರೆಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply