masthmagaa.com:

ರಾಜ್ಯದಲ್ಲಿ ಇಂದು 283 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 6 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,90,235 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 38,118 ಆಗಿದೆ. ಇಂದು 290 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 29,44,099 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 7,989 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 1.05 ಲಕ್ಷಕ್ಕು ಅಧಿಕ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 5.14 ಕೋಟಿಗೂ ಹೆಚ್ಚು ಟೆಸ್ಟ್​ಗಳನ್ನ ನಡೆಸಿದಂತಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 6.66 ಕೋಟಿಗೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ.

ಇಂದು ಮೃತಪಟ್ಟವರು:

ಮೈಸೂರು 2
ಬೆಂಗಳೂರು ನಗರ 1
ಕೊಪ್ಪಳ 1
ತುಮಕೂರು 1
ಉಡುಪಿ 1

-masthmagaa.com

Contact Us for Advertisement

Leave a Reply