masthmagaa.com:

ರಾಜ್ಯದಲ್ಲಿ ಇಂದು 286 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 7 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,91,142 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 38,138 ಆಗಿದೆ. ಇಂದು 289 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 29,44,958 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 8,017 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 1.11 ಲಕ್ಷಕ್ಕೂ ಅಧಿಕ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 5.18 ಕೋಟಿಗೂ ಹೆಚ್ಚು ಟೆಸ್ಟ್​ಗಳನ್ನ ನಡೆಸಿದಂತಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 6.76 ಕೋಟಿಗೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ.

ಇಂದು ಮೃತ ಪಟ್ಟವರು:

ಬೆಂಗಳೂರು ನಗರ 3
ಕೊಡಗು 1
ಕೊಪ್ಪಳ 1
ಮೈಸೂರು 1
ತುಮಕೂರು 1

-masthmagaa.com

Contact Us for Advertisement

Leave a Reply