masthmagaa.com:

ರಾಜ್ಯದಲ್ಲಿ ಇಂದು 313 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 4 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,92,897 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 38,165 ಆಗಿದೆ. ಇಂದು 369 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 29,47,354 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 7,349 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 86 ಸಾವಿರಕ್ಕು ಅಧಿಕ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 5.24 ಕೋಟಿಗೂ ಹೆಚ್ಚು ಟೆಸ್ಟ್​ಗಳನ್ನ ನಡೆಸಿದಂತಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 6.95 ಕೋಟಿಗೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ.

ಇಂದು ಮೃತಪಟ್ಟವರು:

ಬೆಂಗಳೂರು ನಗರ 2
ರಾಮನಗರ 1
ಉತ್ತರ ಕನ್ನಡ 1

-masthmagaa.com

Contact Us for Advertisement

Leave a Reply