masthmagaa.com:

ರಾಜ್ಯದಲ್ಲಿ ಇಂದು 347 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 10 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,88,041 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 38,071 ಆಗಿದೆ. ಇಂದು 255 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 29,41,233 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 8,708 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 1.08 ಲಕ್ಷಕ್ಕು ಅಧಿಕ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 5.07 ಕೋಟಿಗೂ ಹೆಚ್ಚು ಟೆಸ್ಟ್​ಗಳನ್ನ ನಡೆಸಿದಂತಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 6.52 ಕೋಟಿಗೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ.

ಇಂದು ಮೃತಪಟ್ಟವರು:

ಬೆಂಗಳೂರು ನಗರ 4
ಚಿಕ್ಕಬಳ್ಳಾಪುರ 1
ದಕ್ಷಿಣ ಕನ್ನಡ 1
ದಾವಣಗೆರೆ 1
ಹಾಸನ 1
ಹಾವೇರಿ 1
ಮೈಸೂರು 1

-masthmagaa.com

Contact Us for Advertisement

Leave a Reply