masthmagaa.com:

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7,012 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 51 ಮಂದಿ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,65,586 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 10,478 ಆಗಿದೆ.

ಕಳೆದ 24 ಗಂಟೆಯಲ್ಲಿ 8,344 ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 6,45,825 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 1,09,264 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 945 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದೃಢಪಟ್ಟ ಕೊರೋನಾ ಪ್ರಕರಣಗಳಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ – 9,060, ಕೇರಳ – 7,631, ಕರ್ನಾಟಕ – 7,012, ಆಂಧ್ರಪ್ರದೇಶ – 3,986, ತಮಿಳುನಾಡು – 3,914
ದೆಹಲಿ – 3,299.

-masthmagaa.com

Contact Us for Advertisement

Leave a Reply