ರಾಜ್ಯದ ಇಂದಿನ ಹವಾಮಾನ ವರದಿ ಹೇಗಿದೆ?

masthmagaa.com:

ರಾಜ್ಯದ ಕೆಲವೊಂದುಕಡೆ ಇವತ್ತು ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿತ್ತು. ಕಳೆದ 24 ಗಂಟೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಚಿಕ್ಕಬಳ್ಳೇಕೆರೆ ಎಂಬಲ್ಲಿ ಅತಿಹೆಚ್ಚು 146 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಕೆಲವೊಂದು ಕಡೆ ಭಾರಿ ಮಳೆ ಬಹುತೇಕ ಕಡೆ ಸಾಧರಣ ಮಳೆಯಾಗೋ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಕೆಲವೊಂದುಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply