ಬಾಹುಬಲಿ, RRR ದಾಖಲೆ ಮುರಿದ ಕೆಜಿಎಫ್ 2 ಟ್ರೈಲರ್!

masthmagaa.com:

ಭಾನುವಾರ ಸಂಜೆ 6:40ಕ್ಕೆ 5 ಭಾಷೆಗಳಲ್ಲಿ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿಯನದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದ್ದು, ಬಿಡುಗಡೆಯಾದ 24 ಗಂಟೆಗಳಲ್ಲಿ 10 ಕೋಟಿಗೂ ಹೆಚ್ಚು ವೀಕ್ಷಣೆ ಪಡೆಯುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.

ರಾಕಿಂಗ್ ಸ್ಟಾರ್ ಯಶ್ ಜೊತೆಗೆ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್  ಕೆಜಿಎಫ್ ಚಾಪ್ಟರ್ 2 ನಲ್ಲಿ ಅಭಿನಯಿಸಿದ್ದು, 5 ಭಾಷೆಗಳಲ್ಲಿಯೂ ಟ್ರೈಲರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡದ ಟ್ರೇಲರ್ ಟ್ರೆಂಡಿಂಗ್ ನಲ್ಲಿ ನಂಬರ್ 1 ಸ್ಥಾನದಲ್ಲಿದೆ.

ಇನ್ನು ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಕನ್ನಡದಲ್ಲಿ 18 ಮಿಲಿಯನ್, ತೆಲುಗಿನಲ್ಲಿ 20 ಮಿಲಿಯನ್, ಹಿಂದಿಯಲ್ಲಿ 51 ಮಿಲಿಯನ್, ತಮಿಳು 12 ಮಿಲಿಯನ್, ಮಲಯಾಳಂನಲ್ಲಿ 8 ಮಿಲಿಯನ್ ವೀಕ್ಷಣೆ ಪಡೆದುಕೊಂಡು RRR ಮತ್ತು ಬಾಹುಬಲಿ ಸಿನಿಮಾದ ಟ್ರೈಲರ್ ಗಳ ದಾಖಲೆಯನ್ನು ಅಳಿಸಿ ಹಾಕಿದೆ.

-masthmagaa.com

Contact Us for Advertisement

Leave a Reply