ಗಾಳಿಪಟ 2 ಹಾಡನ್ನ ಬಿಡುಗಡೆ ಮಾಡಿದ ಕಿಚ್ಚ ಸುದೀಪ್!

masthmagaa.com:

ಯೋಗರಾಜ್ ಭಟ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್, ದೂದಪೇಡ ದಿಗಂತ್, ಪವನ್ ಕುಮಾರ್ ಅಭಿನಯದ ಗಾಳಿಪಟ 2 ಸಿನಿಮಾದ ಮತ್ತೊಂದು ಹಾಡು ಬಿಡುಗಡೆ ಆಗಿದೆ. ಪ್ರಾಯಶಃ ಅನ್ನೋ ಹಾಡನ್ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಹಾಡಿನ ಕುರಿತು ಮಾತನಾಡಿರುವ ಸುದೀಪ್ ಗಾಳಿಪಟ 2 ಒಂದೊಳ್ಳೆ ಸಿನಿಮಾ ಆಗಿರುತ್ತೆ ಅಂತ ಭವಿಷ್ಯ ನುಡಿದಿದ್ದಾರೆ.

ಹಾಡು ಬಿಡುಗಡೆ ಮಾಡಿದ ಬಳಿಕ ಗಾಳಿಪಟ 2 ಸಿನಿಮಾದ ಟ್ರೈಲರ್ ವೀಕ್ಷಿಸಿದ ಕಿಚ್ಚ ಸುದೀಪ್ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇನ್ನು ಪ್ರಾಯಶಃ ಹಾಡಿಗೆ ನಿರ್ದೇಶಕ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ಸೋನು ನಿಗಮ್ ಕಂಠದಾನ ಮಾಡಿದ್ದಾರೆ. ಇದಕ್ಕೂ ಮೊದಲು ಗಾಳಿಪಟ 2 ಸಿನಿಮಾದ ಎರಡು ಹಾಡುಗಳು ಕೂಡ ಬಿಡುಗಡೆಯಾಗಿ ಜನರನ್ನು ರಂಜಿಸಿವೆ. ಟ್ರೈಲರ್ಗೂ ಅದ್ಭುತ ರೆಸ್ಪಾನ್ಸ್ ಬಂದಿದೆ. ಅಲ್ಲದೇ, ಹೀಗಾಗಿ ಗಾಳಿಪಟ 2 ಸಿನಿಮಾ ಕೂಡ ಭರವಸೆ ಮೂಡಿಸಿದೆ. ಯೋಗರಾಜ್ ಭಟ್ ಮತ್ತು ನಿರ್ಮಾಪಕ ರಮೇಶ್ ರೆಡ್ಡಿ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿವೆ.
ಪ್ರಾಯಶಃ ಹಾಡನ್ನ ನೋಡೋಕೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
-masthmagaa.com
Contact Us for Advertisement

Leave a Reply