ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ: ಕೆಪಿಸಿಸಿ

ಮಾಜಿ ಡಿಸಿಎಂ ಪರಮೇಶ್ವರ್ ಮತ್ತು ಜಾಲಪ್ಪ ಕುಟುಂಬದ ಮೇಲಿನ ಐಟಿ ದಾಳಿಯನ್ನು ಕಾಂಗ್ರೆಸ್ ಖಂಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಡಾ.ಪರಮೇಶ್ವರ್ ಮತ್ತು ಇತರ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಕೇವಲ ಆಯ್ದ ಬಿಜೆಪಿಯೇತರ ರಾಜಕೀಯ ನಾಯಕರುಗಳ ಮೇಲೆ ಮುಂದುವರಿದ ದಾಳಿಗಳು, ಕೇಂದ್ರವು ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದನ್ನು ದೃಢೀಕರಿಸುತ್ತದೆ ಎಂದು ಕೆಂಡಕಾರಿದೆ.

ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆಯಿಂದಲೂ ಪರಮೇಶ್ವರ್ ಮತ್ತು ಜಾಲಪ್ಪ ಕುಟುಂಬಸ್ಥರ ಮೇಲೆ ದಾಳಿ ನಡೆಸಿದೆ. ಪರಮೇಶ್ವರ್ ಗೆ ಸೇರಿದ ಶಿಕ್ಷಣ ಸಂಸ್ಥೆಗಳು, ಕಚೇರಿ, ಮನೆ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದೆ.

Contact Us for Advertisement

Leave a Reply