ಕೃಷ್ಣ ಜನ್ಮಭೂಮಿ ಬಳಿ ಅಕ್ರಮ ಕಟ್ಟಡ ತೆರವಿಗೆ ಸುಪ್ರೀಂಕೋರ್ಟ್‌ ತಡೆ!

masthmagaa.com:

ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿಯ ಬಳಿ ಅಕ್ರಮ ಕಟ್ಟಡಗಳನ್ನ ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಇತರರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮುಂದಿನ 10 ದಿನಗಳ ಅವಧಿಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಒಂದು ವಾರದ ನಂತರ ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಲಾಗುತ್ತದೆ ಅಂತ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ.

-masthmagaa.com

Contact Us for Advertisement

Leave a Reply