ತಮ್ಮನ್ನು `ಆಲೂಗಡ್ಡೆ ರೈತ’ ಎಂದಿದ್ದಕ್ಕೆ ಎಚ್‍ಡಿಕೆ ಕೆಂಡ

ತಮ್ಮನ್ನು ಆಲೂಗಡ್ಡೆ ಬೆಳೆದ ರೈತ ಎಂದಿದ್ದ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಹ ಬಂದು ಸಾವಿರಾರು ಕುಟುಂಬಗಳ ಬದುಕು ಡೋಲಾಯಮಾನವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೇ ನೆರೆ ಪರಿಹಾರ ಸಿಗುತ್ತಿಲ್ಲ ಎಂದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾನ್ಯ ಸಂಸದರು ರೈತರೊಂದಿಗಿದ್ದು ಧೈರ್ಯ ತುಂಬುವ ಕೆಲಸ ಮಾಡುವ ಬದಲು ಕ್ಷೇತ್ರದಿಂದ ಕಾಲ್ಕಿತ್ತಿರುವುದು ಅವರ ರೈತಪರ ಕಾಳಜಿಯನ್ನು ಎತ್ತಿ ತೋರಿಸುತ್ತದೆ ಎಂದಿದ್ದಾರೆ.

ಕುಮಾರಸ್ವಾಮಿಯವರು ಚಿಕ್ಕಮಗಳೂರಿಗೆ ಭೇಟಿ ನೀಡಿದಾಗ ಅಲ್ಲಿನ ರೈತರು ಗೋಳು ತೋಡಿಕೊಂಡಿದ್ದರು. ಈ ವೇಳೆ ಮಾತನಾಡಿದ್ದ ಕುಮಾರಸ್ವಾಮಿ, ಸಂಸದರಿಗೆ ರೈತರ ಕಷ್ಟ ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಶೋಭಾ ಕರಂದ್ಲಾಜೆ, ನನ್ನ ಊರಿಗೆ ಬಂದು ನೋಡಿದರೆ ರೈತರು ಯಾರು ಎಂದು ಗೊತ್ತಾಗುತ್ತೆ. ಕುಮಾರಸ್ವಾಮಿಯವರು ಆಲೂಗಡ್ಡೆ ಬೆಳೆದು ರೈತರಾದವರು. ಅವರ ಬಗ್ಗೆ ನಾನು ಕಮೆಂಟ್ ಮಾಡಲ್ಲ ಎಂದಿದ್ದರು.

Contact Us for Advertisement

Leave a Reply