ಯಡಿಯೂರಪ್ಪಗೆ `ತಂತಿ’ಯಲ್ಲಿ ಚುಚ್ಚಿದ ಕುಮಾರಸ್ವಾಮಿ..!

ತಂತಿ ಮೇಲೆ ನಡೆಯುತ್ತಿದ್ದೇನೆ ಎಂದಿದ್ದ ಸಿಎಂ ಯಡಿಯೂರಪ್ಪನವರಿಗೆ ಎಚ್.ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅತೃಪ್ತ ಶಾಸಕರನ್ನು ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ. ಸಿಎಂ ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ ಮೇಲಿಂದಲೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ. ಮನೆ, ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡಬೇಕು. ಅದು ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ ಅಂತ ವ್ಯಂಗ್ಯವಾಡಿದ್ದಾರೆ.

ನಿನ್ನೆ ದಾವಣಗೆರೆಯಲ್ಲಿ ಮಾತನಾಡಿದ್ದ ಯಡಿಯೂರಪ್ಪ, ನಾನು ತಂತಿ ಮೇಲೆ ನಡೆಯುತ್ತಿದ್ದೇನೆ. ಯಾವುದೇ ತೀರ್ಮಾನ ಕೈಗೊಳ್ಳಲು 10 ಬಾರಿ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಸರ್ಕಾರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವಾಗ ಅದು ಬೇರೆ ಸಮಾಜದ ಮೇಲೆ ಬೀರುವ ಪರಿಣಾಮದ ಬಗ್ಗೆ ಯೋಚಿಸಬೇಕಾಗುತ್ತೆ ಎಂದಿದ್ದರು. ಯಡಿಯೂರಪ್ಪರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು.

Contact Us for Advertisement

Leave a Reply