ಸಿಎಂ ಯಡಿಯೂರಪ್ಪ ರಾಜಕೀಯ ನಾಟಕ: ಕುಮಾರಸ್ವಾಮಿ

ದೆಹಲಿಗೆ ತೆರಳಿ ಅಮಿತ್ ಶಾ ಭೇಟಿಯಾಗಿರುವ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕುಮಾರಸ್ವಾಮಿ ಕೆಂಡಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು `ರಾಜಕೀಯ ನಾಟಕ’. ಅಮಿತ್ ಶಾ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ ಯಡಿಯೂರಪ್ಪನವರು ದೆಹಲಿಗೆ ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಮಿತ್ ಶಾ ಭೇಟಿ ಬಳಿಕ ಮಾತನಾಡಿದ್ದ ಯಡಿಯೂರಪ್ಪ, ನೆರೆ ಪರಿಹಾರ ಕುರಿತು ಚರ್ಚಿಸಲು ಬಂದಿದ್ದೇನೆ. ಅನರ್ಹರ ಬಗ್ಗೆ ಚರ್ಚೆ ನಡೆಸಿಲ್ಲ ಎಂದಿದ್ದರು.

Contact Us for Advertisement

Leave a Reply