ವಿಧಾನ ಪರಿಷತ್‌: 5 ಮಸೂದೆಗಳಿಗೆ ಅನುಮೋದನೆ

masthmagaa.com:

ವಿಧಾನ ಪರಿಷತ್‌ ಅಧಿವೇಶನದಲ್ಲಿ ವಿರೋಧ ಪಕ್ಷದ ಸದಸ್ಯರ ಗೈರು ಹಾಜರಿಯ ನಡುವೆಯೇ 5 ತಿದ್ದುಪಡಿ ಮಸೂದೆಗಳನ್ನ ಅಂಗೀಕರಿಸಲಾಗಿದೆ. ಸಣ್ಣ ಮತ್ತು ಅತಿಸಣ್ಣ ರೈತರು ಹಾಗೂ ಆರ್ಥಿಕ ದುರ್ಬಲ ವರ್ಗದವರಿಗೆ ನೆರವಾಗುವ ನಿಟ್ಟಿನಲ್ಲಿ ತರಲಾಗಿರುವ ಸಿವಿಲ್‌ ಪ್ರಕ್ರಿಯಾ ಸಂಹಿತೆ (ತಿದ್ದುಪಡಿ) ಮಸೂದೆ ಮತ್ತು ರಾಜ್ಯದಲ್ಲಿನ ನ್ಯಾಯಾಲಯಗಳು ಮತ್ತು ಶಾಸನಬದ್ಧ ನ್ಯಾಯ ಮಂಡಳಿಯ ಮುಂದೆ ಸರ್ಕಾರಿ ವ್ಯಾಜ್ಯ ನಿರ್ವಹಣೆ ವಿಷಯದಲ್ಲಿ ದಕ್ಷತೆ ಮತ್ತು ಜವಾಬ್ದಾರಿಯುತ ನಿರ್ವಹಣೆಯನ್ನು ಖಚಿತಪಡಿಸುವ ಉದ್ದೇಶದಿಂದ ತರಲಾಗಿರುವ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ ಮಸೂದೆ 2023, ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ಮಸೂದೆ, ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, ಕರ್ನಾಟಕ ಸಹಕಾರ ಸಂಘಗಳ ಮಸೂದೆಗಳಿಗೆ ವಿಧಾನ ಪರಿಷತ್‌ನಲ್ಲಿ ಅನುಮೋದನೆ ಸಿಕ್ಕಿದೆ. ಅಂದ್ಹಾಗೆ ಈಗಾಗಲೇ ಈ ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದು, ರಾಜ್ಯಪಾಲರು ಸಹಿ ಹಾಕಿದ ಬಳಿಕ ಕಾನೂನಾಗಿ ಜಾರಿಗೆ ಬರಲಿವೆ. ಇತ್ತ 21 ದಿನಗಳ ಕಾಲ ನಡೆದ ವಿಧಾನಸಭೆ ಅಧಿವೇಶನ ಇಂದು ಮುಕ್ತಾಯವಾಗಿದೆ.

-masthmagaa.com

Contact Us for Advertisement

Leave a Reply