ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನ ಭೇಟಿಯಾದ ಕುಸ್ತಿಪಟುಗಳು! ಪ್ರತಿಭಟನೆ ಹಿಂಪಡೆದರಾ?

masthmagaa.com:

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ WFI ಮುಖ್ಯಸ್ಥ ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ ಸಿಂಗ್‌ ಅವ್ರ ವಿರುದ್ಧ ಕ್ರಮ ಕೂಗೊಳ್ಳುವಂತೆ ಪ್ರತಿಭಟನೆ ಮಾಡ್ತಿರುವ ಕುಸ್ತಿಪಟುಗಳು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವ್ರನ್ನ ಭೇಟಿ ಮಾಡಿದ್ದಾರೆ. ಈ ಸಭೆಯಲ್ಲಿ ಕುಸ್ತಿಪಟುಗಳಾದ ಬಜರಂಗ್‌ ಪುನಿಯಾ, ಸಾಕ್ಷಿ ಮಲಿಕ್‌ ಹಾಗೂ ಸಂಗೀತ ಫೋಗಟ್‌ ಅವ್ರು ಅಮಿತ್‌ ಶಾ ಅವ್ರಿಗೆ ಸಮಸ್ಯೆ ಕುರಿತು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಬ್ರಿಜ್‌ಭೂಷಣ್‌ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ತ್ವರಿತ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯಿಸಿದ್ದಾರೆ. ಇನ್ನು ಕಾನೂನು ಎಲ್ಲರಿಗೂ ಒಂದೇ. ನಾವು ನಿಷ್ಪಕ್ಷವಾದ ತನಿಖೆ ನಡೆಸುತ್ತೇವೆ. ಅಪರಾಧ ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಇತ್ತ ಅಮಿತ್‌ ಶಾ ಅವ್ರನ್ನ ಭೇಟಿಯಾದ ಬೆನ್ನಲ್ಲೇ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್‌ ಪುನಿಯಾ, ಸಾಕ್ಷಿ ಮಲಿಕ್‌ ಹಾಗೂ ವಿನೇಶ್‌ ಫೋಗಟ್‌ ಅವ್ರು ತಮ್ಮ ಕೆಲಸಗಳಿಗೆ ಮರಳಿದ್ದಾರೆ. ಆದರೆ, ಕುಸ್ತಿಪಟುಗಳು ಪ್ರತಿಭಟನೆಯಿಂದ ಹಿಂದೆ ಸರಿತಿರೋ ಸುದ್ದಿಯನ್ನ ಸಾಕ್ಷಿ ಮಲಿಕ್ ಅಲ್ಲಗಳೆದಿದ್ದು, ಪ್ರತಿಭಟನೆ ಜೊತೆಗೆ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ ಅಂತ ಹೇಳಿದ್ದಾರೆ. ಇನ್ನು ಸಾಕ್ಷಿ ಮಲಿಕ್‌ ಹಾಗೂ ಇತರ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ ಅನ್ನೊ ಸುದ್ಧಿಗಳು ಹರಿದಾಡಿದ್ದವು. ಹೀಗಾಗಿ ಈ ವರದಿಗಳನ್ನು ಸಾಕ್ಷಿ ಮಲಿಕ್ ನಿರಾಕರಿಸಿದ್ದಾರೆ. ನ್ಯಾಯಕ್ಕಾಗಿ ನಡೆಯುವ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ಸರಿಯುವುದೂ ಇಲ್ಲ. ನಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply