ರಾಜ್ಯದ 14 ಸೇರಿದಂತೆ ಒಟ್ಟು 93 ಲೋಕಸಭಾ ಕ್ಷೇತ್ರಗಳಿಗೆ ಮತದಾನ!

masthmagaa.com:

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕ್ಲೈ ಮ್ಯಾಕ್ಸ್‌ ಹಂತಕ್ಕೆ ತಲುಪಿದ್ದು ಉತ್ತರ ಮತ್ತು ಮಧ್ಯಕರ್ನಾಟಕದ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ. ಕರ್ನಾಟಕವೂ ಸೇರಿದಂತೆ ಒಟ್ಟು 11 ರಾಜ್ಯಗಳ 93 ಕ್ಷೇತ್ರಗಳಲ್ಲಿ ಮತದಾನ ಆಗಲಿದೆ. ರಾಜ್ಯದ ವಿಚಾರಕ್ಕೆ ಬಂದ್ರೆ ಬೆಳಗಾವಿ, ಚಿಕ್ಕೋಡಿ, ಕಲಬುರ್ಗಿ, ವಿಜಯಪುರ, ಹಾವೇರಿ, ಕೊಪ್ಪಳ, ಶಿವಮೊಗ್ಗ, ರಾಯಚೂರು, ಬಳ್ಳಾರಿ, ಉತ್ತರ ಕನ್ನಡ, ಬೀದರ್‌, ಧಾರವಾಡ, ಶಿವಮೊಗ್ಗ ಮತ್ತು ದಾವಣಗೆರೆ ಕ್ಷೇತ್ರಗಳಲ್ಲಿ ವೋಟಿಂಗ್ ಆಗಲಿದೆ. ಮೇ 5ರ ಸಂಜೆ 5 ಗಂಟೆಯಿಂದ ಮೇ 7ರ ಮಧ್ಯರಾತ್ರಿವರೆಗೆ ಈ ಕ್ಷೇತ್ರಗಳಲ್ಲಿ ಮಧ್ಯ ಮಾರಾಟ ನಿಷೇಧಿಸಲಾಗಿದೆ. ಜೊತೆಗೆ ಹೈಕೋರ್ಟ್‌ ನ್ಯಾಯಪೀಠಗಳಿಗೆ, ಬ್ಯಾಂಕು , ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಇನ್ನು ಉತ್ತರಕರ್ನಾಟಕದ ಭಾಗದಲ್ಲಿ ಮತದಾನ ನಡಿತಿರೊದ್ರಿಂದ ಮತದಾರರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರಿನಿಂದ ಬಹುತೇಕ ಕ್ಷೇತ್ರಗಳಿಗೆ KSRTC ಹೆಚ್ಚಿನ ಬಸ್‌ಗಳನ್ನ ನಿಯೋಜಿಸಿದೆ. ವಿಜಯಪುರ, ಹೊಸಪೇಟೆ, ಹುಬ್ಬಳ್ಳಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಿಗೆ ನೈರುತ್ಯ ರೈಲ್ವೆಯಿಂದ ಒಟ್ಟು 5 ವಿಶೇಷ ರೈಲುಗಳು ಓಡಾಟ ನಡೆಸಲಿದೆ. ಇನ್ನು 14 ಕ್ಷೇತ್ರಗಳಲ್ಲಿ ಸುಮಾರು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಇದರಲ್ಲಿ 1,29,48,978 ಪುರುಷ, 1,29,66,570 ಮಹಿಳೆಯರಿದ್ದು, 1935 ಇತರೆ, ಮತ್ತು 35,465 ಸೇವಾ ಮತದಾರರಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಕಲಬುರಗಿ ಕ್ಷೇತ್ರದಲ್ಲಿ ಅತೀ ಹೆಚ್ಚುಅಂದ್ರೆ 20,98,202 ಮತದಾರರಿದ್ರೆ, ಉತ್ತರ ಕನ್ನಡದಲ್ಲಿ 16,41,156 ಮತದಾರರಿದ್ದಾರೆ. 14 ಕ್ಷೇತ್ರಗಳಲ್ಲಿ ಒಟ್ಟು 28,269 ಮತಗಟ್ಟೆಗಳನ್ನು ತೆರೆಯಲಾಗಿದೆ. ಇನ್ನು ಈ ಚುನಾವಣೆಯಲ್ಲಿ ಅನೇಕ ಘಟಾನುಘಟಿ ನಾಯಕರಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್‌ ಶೆಟ್ಟರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ, ಹಾಗೇ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ್ ಪಾಟೀಲ್, ಈಶ್ವರ್ ಖಂಡ್ರೆ ಅವರ ಮಕ್ಕಳು ಈ ಬಾರಿಯ ಚುನಾವಣೆಯಲ್ಲಿ ಅದೃಷ್ಟಪರೀಕ್ಷೆಗೆ ಇಳಿದಿದ್ದಾರೆ.

-masthmagaa.com

Contact Us for Advertisement

Leave a Reply