“ಶಾರ್ದೂಲ” ಚಿತ್ರದ ಲಿರಿಕಲ್ ಹಾಡಿಗೆ ಭಾರೀ ಮೆಚ್ಚುಗೆ!.

masthmagaa.com:

ತಮ್ಮ ಅಮೋಘ ಕಂಠದಿಂದ ಕೇಳುಗರ ಮನಗೆದ್ದಿರುವ ಸಂಚಿತ್ ಹೆಗಡೆ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ “ಶಾರ್ದೂಲ” ಚಿತ್ರದ “ಒಂದು ಸಣ್ಣ ತಪ್ಪನ್ನು ಮಾಡಿ ಬಿಡಲೇ ನಾನು” ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅರವಿಂದ್ ಕೌಶಿಕ್ ಬರೆದಿರುವ ಈ ಹಾಡಿಗೆ ಸತೀಶ್ ಬಾಬು ಸಂಗೀತ ನೀಡಿದ್ದಾರೆ.

ಭೈರವ ಸಿನಿಮಾಸ್ ಮತ್ತು ಸಿ ವಿ ಆರ್ ಸಿನಿಮಾಸ್ ಲಾಂಛನದಲ್ಲಿ ರೋಹಿತ್ ಶಾಂತಪ್ಪ ಹಾಗೂ ಕಲ್ಯಾಣ್ ಸಿ ನಿರ್ಮಿಸಿರುವ ಈ ಚಿತ್ರ ಆಗಸ್ಟ್ ವೇಳೆಗೆ ತೆರೆಗೆ ಬರುವ ಸಾಧ್ಯತೆಯಿದೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ.

ಈ ಹಿಂದೆ ನಮ‌್ ಏರಿಯಲ್ಲೊಂದು‌ ದಿನ, ತುಘಲಕ್ ಹಾಗೂ ಹುಲಿರಾಯ ಚಿತ್ರಗಳನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದರು.
ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ದೆವ್ವ ಇರಬಹುದಾ? ಎಂಬ ಅಡಿಬರಹವಿದೆ. ವೈ.ಜಿ.ಆರ್ ಮನು ಛಾಯಾಗ್ರಹಣ, ಸತೀಶ್ ಬಾಬು ಸಂಗೀತ ನಿರ್ದೇಶನ, ಶಿವರಾಜ್ ಮೇಹು ಸಂಕಲನ ಹಾಗು ಮಾಸ್ ಮಾದ, ವೈಲೆಂಟ್ ವೇಲು ಮತ್ತು ಅಲ್ಟಿಮೇಟ್ ಶಿವು ಅವರ‌ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಪಿ.ಯು.ಸಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಚೇತನ್ ಚಂದ್ರ, ನಿರ್ದೇಶಕ, ನಟ ರವಿತೇಜ, ಕೃತಿಕ ರವೀಂದ್ರ, ಐಶ್ವರ್ಯ ಪ್ರಸಾದ್, ಕಲ್ಯಾಣ್, ಹೃಷಿಕೇಶ್, ಮಹೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

masthmagaa.com

Contact Us for Advertisement

Leave a Reply