ತಿಲಕ್ ಅಭಿನಯದ “H/34 ಪಲ್ಲವಿ ಟಾಕೀಸ್” ಚಿತ್ರದ ಹಾಡಿಗೆ ಅದ್ಭುತ ಎಂದ ಪ್ರೇಕ್ಷಕರು!!

masthmagaa.com:ನಟ ತಿಲಕ್ ಅಭಿನಯದ “H/34 ಪಲ್ಲವಿ ಟಾಕೀಸ್” ಚಿತ್ರದ “ಬರೆವೆ ಬರೆವೆ ಒಲವ ಕವನ” ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಶ್ರೀನಿವಾಸ್ ಚಿಕ್ಕಣ್ಣ(ಸೀನಿ) ಬರೆದಿರುವ ಈ ಹಾಡನ್ನು ಬಾಲಿವುಡ್‌ ನ ಜನಪ್ರಿಯ ಗಾಯಕ ಅಂಕಿತ್ ತಿವಾರಿ ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್   ಲೋಕನಾಥ್ ಸಂಗೀತ ನೀಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿರುವ ಈ ಹಾಡಿಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ.
ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆಗಲಿದೆ. ಜೂನ್ ಎರಡನೇ ವಾರದಲ್ಲಿ ಓ ಟಿ ಟಿ ಫ್ಲಾಟ್ ಫಾರಂ ಮೂಲಕ ಚಿತ್ರ ಬಿಡುಗಡೆಯಾಗಲಿದೆ. ಕಾಲಭೈರವ ಆರ್ಟ್ಸ್ ಲಾಂಛನದಲ್ಲಿ ಮಂಜುನಾಥ್ ಕೆ ಹಾಗೂ ರವಿಕಿರಣ್ ಎಂ ಗೌಡ ನಿರ್ಮಿಸಿರುವ ಈ ಚಿತ್ರವನ್ನು ಶ್ರೀನಿವಾಸ್ ಚಿಕ್ಕಣ್ಣ (ಸೀನಿ) ನಿರ್ದೇಶಿಸಿದ್ದಾರೆ.
ಈ ಹಿಂದೆ “6ನೇ ಮೈಲಿ” ಚಿತ್ರವನ್ನು ನಿರ್ದೇಶಿಸಿದ್ದ, ಶ್ರೀನಿವಾಸ್ ಚಿಕ್ಕಣ್ಣ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರ. ಹಾರಾರ್ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ ಹಾಗೂ  ಅಕ್ಷಯ್ ಪಿ ರಾವ್ ಸಂಕಲನ ಈ ಚಿತ್ರಕ್ಕಿದೆ. ತಿಲಕ್ ಅವರಿಗೆ ನಾಯಕಿಯಾಗಿ ಯಜ್ಞಾ ಶೆಟ್ಟಿ ಅಭಿನಯಿಸಿದ್ದಾರೆ. ಸಚೇಂದ್ರ ಪ್ರಸಾದ್, ಅವಿನಾಶ್, ಸುಧಾ ಬೆಳವಾಡಿ, ಅಚ್ಯುತಕುಮಾರ್, ಪದ್ಮಜಾರಾವ್, ಕುರಿ ಪ್ರತಾಪ್, ವಿಶ್ವ, ಅಮೃತ ಮಯೂರಿ, ರಾಜೇಶ್ವರಿ, ರಾಕ್ ಲೈನ್ ಸುಧಾಕರ್, ಅಜಯ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
-masthmagaa.com

Contact Us for Advertisement

Leave a Reply