ಜಾತಿಗಣತಿ ವರದಿ ಸ್ವೀಕಾರ ಮಾಡ್ತೇವೆ, ಹಿಂದಿನ ಸರ್ಕಾರಗಳಿಂದ ಆಗಿರಲಿಲ್ಲ : CM ಸಿದ್ದರಾಮಯ್ಯ!

masthmagaa.com:

ಜಾತಿಗಣತಿ ವರದಿಯನ್ನ ನಾವು ಸ್ವೀಕಾರ ಮಾಡುತ್ತೇವೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತಾಡಿದ ಅವರು, ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ಅಮೇಲೆ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ.ಆದರೆ ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಅದನ್ನ ಸ್ವೀಕರಿಸುತ್ತೇವೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.

masthmagaa.com

Contact Us for Advertisement

Leave a Reply