ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕರ್ನಾಟಕ ಬಸ್‌ ಮೇಲೆ ಕಲ್ಲು ತೂರಾಟ

mastmagaa.com:

ಕರ್ನಾಟಕ-ಮಹಾರಾಷ್ಟ್ರಕ್ಕೆ ಸಂಬಂಧಿಸದಂತೆ ಬೆಳಗಾವಿ ಗಡಿ ಪ್ರದೇಶಗಳಲ್ಲಿ ಉದ್ವಿಗ್ನತೆ ಜಾಸ್ತಿಯಾಗ್ತಾನೇ ಇದೆ. ಪುಣೆಯಿಂದ ಅಥಣಿಗೆ ಬರ್ತಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಮಹಾರಾಷ್ಟ್ರ ಗಡಿಯಲ್ಲಿ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದ್ರಿಂದ ಬಸ್ಸಿನ ಮುಂಭಾಗದ ಗಾಜು ಹಾಗೂ ಎರಡು ಕಿಟಕಿಗಳು ಒಡೆದಿವೆ. ಇತ್ತ ಗಡಿ ವಿವಾದ ಬಗ್ಗೆ ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾವು ಸಂವಿಧಾನ ಹಾಗೂ ಕಾನೂನು ಬದ್ದವಾಗಿ ಇದ್ದೇವೆ. ಕರ್ನಾಟಕದ ಭೂ ಪ್ರದೇಶದಲ್ಲಿ ಯಾವುದೇ ಬದಲಾವಣೆಗಳಾಗಲ್ಲ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗೂ ಈ ಬಗ್ಗೆ ಸರ್ವಪಕ್ಷ ಹಾಗೂ ಕಾನೂನು ತಜ್ಞರ ಸಭೆ ಕರೆದಿದ್ದೇನೆ. ಯಾವ ವಿಷಯಗಳನ್ನ ಮಂಡಿಸಬೇಕು ಅನ್ನೊ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಅಂತ ಹೇಳಿದ್ದಾರೆ. ಇನ್ನೊಂದ್‌ ಕಡೆ ಮಹಾರಾಷ್ಟ್ರದಲ್ಲಿರೊ ಕನ್ನಡಿಗರು ಕರ್ನಾಟಕದ ಹೊಸ ನಕ್ಷೆ ತಯಾರಿಸಿ ಶೇರ್‌ ಮಾಡಿದ್ದಾರೆ. ಕರ್ನಾಟಕಕ್ಕೆ ಸೋಲಾಪುರ, ಉಸ್ಮನಬಾದ್​, ಲಾತೂರು, ಸಂಗಲ್ಕಿ ಮತ್ತು ಕೊಲ್ಹಾಪುರ ಜಿಲ್ಲೆಗಳನ್ನ ಸೇರಿಸಿರೊ ಹೊಸ ನಕ್ಷೆ ಎಲ್ಲಡೆ ವೈರಲ್‌ ಆಗ್ತಿದೆ. ಇನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಗ್ರಾಮಗಳು ಕರ್ನಾಟಕ ರಾಜ್ಯ ಸೇರೋಕೆ ಉತ್ಸುಕರಾಗಿದ್ದಾರೆ. ಈ ಹಿನ್ನಲೆಯಲ್ಲಿ ಬೀದಿಗಿಳಿದು ಮಹಾರಾಷ್ಟ್ರ ಸರ್ಕಾರದ ವಿರುದ್ದ ಹೋರಾಟ ನಡೆಸುತ್ತಿದ್ದಾರೆ. ಅಲ್ಲಿನ ತಿಕ್ಕುಂಡಿ ಗ್ರಾಮದಲ್ಲಿ ಕನ್ನಡ ಬಾವುಟಗಳನ್ನ ಹಾರಿಸಿ, ಜೈ ಕರ್ನಾಟಕ ಅಂತ ಬರೆದಿರುವ ಬ್ಯಾನರ್‌ಗಳನ್ನ ಹಾಕಿ ಮಹಾರಾಷ್ಟ್ರ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

-masthmagaa.com

Contact Us for Advertisement

Leave a Reply