masthmagaa.com:

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್​ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ಉಪಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಜಿತ್ ಪವಾರ್, ‘ನನಗೆ ನಡೆಸಿದ ಕೊರೋನಾ ಪರೀಕ್ಷೆ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಬ್ರೀಚ್​ ಕ್ಯಾಡಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಪಕ್ಷದ ನಾಯಕರು, ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ. ಸ್ವಲ್ಪ ವಿಶ್ರಾಂತಿ ಬಳಿಕ ಶೀಘ್ರದಲ್ಲೇ ನಿಮ್ಮ ಜೊತೆಗೆ ಇರುತ್ತೇನೆ’ ಅಂತ ಹೇಳಿದ್ದಾರೆ. ಅಂದ್ಹಾಗೆ ಎನ್​ಸಿಪಿಯ ಅಜಿತ್ ಪವಾರ್​ಗೆ 61 ವರ್ಷ ವಯಸ್ಸಾಗಿದೆ. ಕಳೆದ ಗುರುವಾರ ಅವರಿಗೆ ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಇದೀಗ ಪಾಸಿಟಿವ್ ಬಂದಿದೆ.

-masthmagaa.com

Contact Us for Advertisement

Leave a Reply