ವಿವೇಕ್ ಒಬೆರಾಯ್ ಮನೆ ಮೇಲಿನ ಸಿಸಿಬಿ ದಾಳಿ ಬಗ್ಗೆ ಮಹಾರಾಷ್ಟ್ರ ಸರ್ಕಾರ ಹೇಳಿದ್ದೇನು?

masthmagaa.com:

ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವನನ್ನು ಹುಡುಕಿಕೊಂಡು ಬೆಂಗಳೂರಿನ ಸಿಸಿಬಿ ಪೊಲೀಸರು ನಿನ್ನೆ ಮುಂಬೈಗೆ ಹೋಗಿದ್ದರು. ಮುಂಬೈನಲ್ಲಿರುವ ಬಾಲಿವುಡ್​ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದರು. ಅಂದ್ಹಾಗೆ ವಿವೇಕ್ ಒಬೆರಾಯ್ ಅವರ ಪತ್ನಿ ಪ್ರಿಯಾಂಕಾ ಆಳ್ವ ಒಬೆರಾಯ್ ಅವರು ಆದಿತ್ಯ ಆಳ್ವ ಅವರ ಸಹೋದರಿ. ಈ ಸಂಬಂಧ ಸಿಸಿಬಿ ಪೊಲೀಸರು ಪ್ರಿಯಾಂಕಾ ಆಳ್ವಗೂ ನೋಟಿಸ್ ನೀಡಿದ್ದಾರೆ. ಇದೀಗ ಸಿಸಿಬಿ ಪೊಲೀಸರ ಕಾರ್ಯಾಚರಣೆ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಮಾತನಾಡಿದ್ದಾರೆ.

ಏನ್ ಹೇಳಿದ್ದಾರೆ ಅಂದ್ರೆ, ‘ಡ್ರಗ್​ ಪ್ರಕರಣದಲ್ಲಿ ವಿವೇಕ್ ಒಬೆರಾಯ್ ಮತ್ತು ಸಂದೀಪ್​ ಸಿಂಗ್​ನನ್ನು ವಿಚಾರಣೆ ನಡೆಸಲು ಬೆಂಗಳೂರು ಪೊಲೀಸರು ಮುಂಬೈಗೆ ಬಂದಿದ್ದರು. ಆದ್ರೆ ಎನ್​ಸಿಬಿ ಈ ಬಗ್ಗೆ ತನಿಖೆ ನಡೆಸುತ್ತಿಲ್ಲ. ಅವರಿಗೆ ಮೇಲಿನಿಂದ ಒತ್ತಡ ಹೇರಲಾಗುತ್ತಿದೆ. ಡ್ರಗ್​ ಕೇಸ್​ನಲ್ಲಿ ವಿವೇಕ್ ಒಬೆರಾಯ್ ಲಿಂಕ್​ ಬಗ್ಗೆ ಎನ್​ಸಿಬಿ ತನಿಖೆ ನಡೆಸಬೇಕು ಅಂತ ನಾವು ಮನವಿ ಮಾಡುತ್ತೇವೆ. ಒಂದ್ವೇಳೆ ಅವರಿಗೆ ಆಗದಿದ್ದರೆ ಮುಂಬೈ ಪೊಲೀಸರೇ ತನಿಖೆ ನಡೆಸುತ್ತಾರೆ’ ಅಂತ ಅನಿಲ್ ದೇಶ್​ಮುಖ್ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply