ಸ್ಯಾನಿಟೈಸರ್​, ಹ್ಯಾಂಡ್​ ವಾಶ್ ಉತ್ಪಾದನಾ ಘಟಕದಲ್ಲಿ ಸ್ಫೋಟ..! ಇಬ್ಬರ ಸಾವು

masthmagaa.com:

ಮಹಾರಾಷ್ಟ್ರ: ದೇಶದಲ್ಲಿ ಕೊರೋನಾ ವೈರಸ್ ಹಾವಳಿ ಜೋರಾಗಿದ್ದು, ಹ್ಯಾಂಡ್​ ಸ್ಯಾನಿಟೈಸರ್ ಮತ್ತು ಹ್ಯಾಂಡ್​ವಾಶ್​​​​ಗೆ ಭಾರಿ ಬೇಡಿಕೆ ಬಂದಿದೆ. ಹೀಗಾಗಿ ಲಾಕ್​ಡೌನ್ ನಡುವೆಯೂ ಸ್ಯಾನಿಟೈಸರ್ ಮತ್ತು ಹ್ಯಾಂಡ್​ವಾಶ್ ಉತ್ಪಾದನಾ ಕಂಪನಿಗಳು ಕಾರ್ಯ ನಿರ್ವಹಿಸುತ್ತಲೇ ಇವೆ. ಆದ್ರೆ ಮುಂಬೈನ ಪಾಲ್​ಘರ್​ನಲ್ಲಿ ಸ್ಯಾನಿಟೈಸರ್ ಮತ್ತು ಹ್ಯಾಂಡ್​​ವಾಶ್ ಉತ್ಪಾದಿಸುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಇಂದು ಬೆಳಗ್ಗೆ 11.30ಕ್ಕೆ ಈ ದುರ್ಘಟನೆ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಘಟನೆ ವೇಳೆ ಕಾರ್ಖಾನೆಯಲ್ಲಿ 66 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಸ್ಥಳಕ್ಕೆ ಧಾವಿಸಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇನ್ನು ಮಹಾರಾಷ್ಟ್ರದಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇವರಲ್ಲಿ 1,298 ಮಂದಿ ಮುಂಬೈನವರೇ ಆಗಿದ್ದಾರೆ.

-masthmagaa.com

 

Contact Us for Advertisement

Leave a Reply