ಮಹಿಷ ದಸರಾ: ಪ್ರತಾಪ್‌ ಸಿಂಹನ ವಿರುದ್ಧ ತಿರುಗಿಬಿದ್ದ ಬಿಜೆಪಿ ಎಸ್‌ಸಿ ಮೋರ್ಚಾ

masthmagaa.com:

ಮಹಿಷ ದಸರಾ ವಿಚಾರಕ್ಕೆ ಸಂಬಂಧಿಸಿದಂತೆ ಪರ-ವಿರೋಧ ವಿವಾದ ಉಂಟಾಗಿದೆ. ಈ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಚಾಮುಂಡಿ ಬೆಟ್ಟ ಸೇರಿ ಮೈಸೂರು ನಗರದ ವ್ಯಾಪ್ತಿಯಲ್ಲಿ ಅಕ್ಟೋಬರ್‌ 12ರ ಮಧ್ಯರಾತ್ರಿ 12 ಗಂಟೆಯಿಂದ ಅಕ್ಟೋಬರ್‌ 14 ರ ಬೆಳಿಗ್ಗೆ 6ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಅಂತ ಮೈಸೂರು ಸಿಟಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಅಂದ್ಹಾಗೆ ಮಹಿಷ ದಸರಾ ಆಚರಣೆ ಮಾಡ್ಬೇಕು ಅಂತ ದಲಿತ ಸಮಿತಿಗಳು ಮತ್ತು ಮಹಿಷ ದಸರಾ ಸಮಿತಿಗಳು ಪಟ್ಟು ಹಿಡಿದಿವೆ. ಇತ್ತ ಇದನ್ನ ವಿರೋಧಿಸಿ ಮೈಸೂರು ಸಂಸದ ಪ್ರತಾಪ್‌ ಸಿಂಹ ಚಾಮುಂಡಿ ಬೆಟ್ಟ ಚಲೋಗೆ ಕರೆ ಕೊಟ್ಟಿದ್ದಾರೆ. ಆದ್ರೆ ಈ ವಿಚಾರವಾಗಿ ಬಿಜೆಪಿಯಲ್ಲೇ ಗೊಂದಲ ಉಂಟಾಗಿರೋದು ಕಂಡು ಬಂದಿದೆ. ಈ ಬಗ್ಗೆ ಮಾತಾಡಿರುವ ಬಿಜೆಪಿ ಎಸ್​ಸಿ ಮೋರ್ಚಾ ಅಧ್ಯಕ್ಷ ಈಶ್ವರ್, ಪ್ರತಾಪಸಿಂಹ ಅವರು ಮಹಿಷ ದಸರಾ ಬಗ್ಗೆ ಇಲ್ಲಸಲ್ಲದ ರಾಜಕೀಯ ಮಾಡುತ್ತಿದ್ದಾರೆ. ಧಾರ್ಮಿಕ ಆಚರಣೆಗೆ ಸಂವಿಧಾನದಲ್ಲಿ ಮುಕ್ತ ಅವಕಾಶವಿದೆ. ಆದ್ರೆ ಅದನ್ನು ದಮನ ಮಾಡೋಕೆ ಪ್ರತಾಪ ಸಿಂಹ ಮುಂದಾಗಿದ್ದಾರೆ. ಅಲ್ದೆ ದಲಿತರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿದ್ದು, ಪಕ್ಷದ ವರಿಷ್ಠರು ಮಧ್ಯ ಪ್ರವೇಶಿಸಿ ಪ್ರತಾಪ್ ಸಿಂಹಗೆ ಬುದ್ಧಿ ಹೇಳಬೇಕು ಅಂತ ಮನವಿ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply