ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಗೆ ಜೀವಾವಧಿ ಶಿಕ್ಷೆ..!

ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಮೆರಿಕಾದ ಮಿಸುರಿಯಲ್ಲಿ ಈ ಘಟನೆ ನಡೆದಿದೆ. ಜೆರಿ ಬೌಸ್ಕಿ ಎಂಬ ತಂದೆ ಮಗಳ ಮೇಲೆ ಹೋಟೆಲೊಂದರಲ್ಲಿ ಅತ್ಯಾಚಾರ ಎಸಗಿ, ಹತ್ಯೆಗೈದಿದ್ದ. ಡೈಜ್ಸಾ ಬೌಕ್ಸಿ ತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದುರ್ದೈವಿ. ಈಕೆ ತನ್ನ ತಂದೆಯನ್ನು ಡ್ರಗ್ಸ್ ಚಟದಿಂದ ಹೊರತರಲು ತುಂಬಾ ಪ್ರಯತ್ನಿಸುತ್ತಿದ್ದಳು. ಅಲ್ಲದೆ ಕಾಲೇಜಿನಲ್ಲಿ ಓದುತ್ತಿದ್ದ ಈಕೆ ಡಿಗ್ರಿ ಎಕ್ಸಾಂಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಈ ಬಗ್ಗೆ ಪ್ರತಿಕ್ರಿಯಿಸಿದ ಕುಟುಂಬಸ್ಥರು ನಮಗೆ ಮೊದಲಿನಿಂದಲೂ ಅನುಮಾನ ಇತ್ತು. ಅವರ ವರ್ತನೆಯೇ ಸರಿಯಾಗಿ ಇರಲಿಲ್ಲ ಅಂತ ಹೇಳಿದ್ದಾರೆ.

Contact Us for Advertisement

Leave a Reply