ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್‌!

masthmagaa.com:

ಇಸ್ಕಾನ್ ತನ್ನ ಗೋಶಾಲೆಗಳಲ್ಲಿರುವ ಗೋವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುತ್ತಿದೆ ಅನ್ನೊ ಬಿಜೆಪಿ ಸಂಸದೆ ಮನೇಕಾ ಗಾಂಧಿ ಹೇಳಿಕೆ ವಿರುದ್ಧ ಇಸ್ಕಾನ್ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದೆ. ಇಸ್ಕಾನ್ ವಿರುದ್ಧ ಸಂಪೂರ್ಣ ಆಧಾರರಹಿತ ಆರೋಪಗಳನ್ನು ಹೊರಿಸಿದ್ದಕ್ಕಾಗಿ ನಾವು ಮನೇಕಾ ಗಾಂಧಿ ಅವರಿಗೆ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ನೋಟಿಸ್ ಕಳುಹಿಸಿದ್ದೇವೆ. ದುರುದ್ದೇಶಪೂರಿತ ಆರೋಪಗಳಿಂದ ಇಸ್ಕಾನ್‌ ಭಕ್ತರು, ಬೆಂಬಲಿಗರು ಮತ್ತು ಹಿತೈಷಿಗಳಿಗೆ ತೀವ್ರ ನೋವುಂಟಾಗಿದೆ ಅಂತ ಇಸ್ಕಾನ್‌ ಕೋಲ್ಕತ್ತಾದ ಉಪಾಧ್ಯಕ್ಷ ರಾಧಾರಮಣ್ ದಾಸ್ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply