ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಇದೇ ಸಕಾಲ: ಶಶಿ ತರೂರ್‌

masthmagaa.com:

ಮಣಿಪುರದಲ್ಲಿ ಕಳೆದ ಕೆಲವು ದಿನಗಳಿಂದ ಹಿಂಸಾಚಾರಕ್ಕೆ ತಿರುಗಿದ್ದ ಜನಾಂಗೀಯ ಗಲಭೆ ಕೊಂಚ ತಣ್ಣಾಗಾಗಿದೆ. ಹೀಗಾಗಿ ಮಣಿಪುರದ ಕೆಲವು ಕಡೆಗಳಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ. ಸೇನಾ ಡ್ರೋನ್‌ಗಳ ಮತ್ತು ಹೆಲಿಕಾಪ್ಟರ್‌ಗಳ ವೈಮಾನಿಕ ಕಾವಲು ಅಡಿಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಇದೇ ವೇಳೆ ಮಣಿಪುರ ಸಿಎಂ ಬಿರೇನ್‌ ಸಿಂಗ್‌ ಅವ್ರು ಮಣಿಪುರದಲ್ಲಿ ಶಾಂತಿ ಕಾಪಾಡುವಂತೆ ಒತ್ತಾಯಿಸಿ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ಯಾವುದೇ ರೀತಿಯ ಹಿಂಸಾಚಾರದಿಂದ ದೂರವಿರುವಂತೆ ಮಣಿಪುರದ ಪ್ರತಿಯೊಬ್ಬರಿಗೂ ನಾನು ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸರು ಮತ್ತು ಅರೆಸೇನಾ ಪಡೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಅಂತ ಬಿರೇನ್‌ ತಿಳಿಸಿದ್ದಾರೆ. ಇತ್ತ ಗಲಭೆ ಪೀಡಿತ ಮಣಿಪುರಕ್ಕೆ ಅನಾವಶ್ಯಕ ಪ್ರಯಾಣ ಕೈಗೊಳ್ಳದಿರಿ ಅಂತ ಕೆನಡಾ ತನ್ನ ಪ್ರಜೆಗಳಿಗೆ ಸೂಚನೆ ನೀಡಿದೆ. ಮತ್ತೊಂದ್ಕಡೆ ಮಣಿಪುರ ಹಿಂಸಾಚಾರವನ್ನ ಉಲ್ಲೇಖಿಸಿ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಣಿಪುರ ರಾಜ್ಯದ ಮತದಾರರು ಬಿಜೆಪಿ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ತೀವ್ರ ವಿಶ್ವಾಸ ದ್ರೋಹವನ್ನ ಅನುಭವಿಸುತ್ತಿದ್ದಾರೆ. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಇದೇ ಸರಿಯಾದ ಸಮಯ ಅಂತ ತರೂರ್‌ ಆಗ್ರಹಿಸಿದ್ದಾರೆ.

-masthmagaa.com

Contact Us for Advertisement

Leave a Reply