ಆರ್ಥಿಕತೆ ವಿಚಾರವಾಗಿ ಕೇಂದ್ರದ ವಿರುದ್ಧ ಸಿಂಗ್ ಗುಡುಗು

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ. ದೇಶದಲ್ಲಿನ ಆರ್ಥಿಕ ಹಿಂಜರಿತದಿಂದ ಮಹಾರಾಷ್ಟ್ರ ಹೆಚ್ಚು ಪ್ರಭಾವಕ್ಕೆ ಒಳಗಾಗಿದೆ. ರಾಜ್ಯದಲ್ಲಿ ಉತ್ಪಾದನಾ ಮಟ್ಟ ಕಳೆ ನಾಲ್ಕು ವರ್ಷಗಳಲ್ಲಿ ನಿರಂತರವಾಗಿ ಕುಸಿಯುತ್ತಿದೆ. ಚೀನಾ ಮೂಲದ ವಸ್ತುಗಳ ಆಮದಿನಿಂದಾಗಿ ದೇಶದಲ್ಲಿ ಉತ್ಪಾದನಾ ಕ್ಷೇತ್ರ ನಷ್ಟ ಅನುಭವಿಸುತ್ತಿದೆ. ಕೈಗಾರಿಕೆ ಕ್ಷೇತ್ರದಲ್ಲೂ ಭಾರಿ ಕೆಟ್ಟ ಪರಿಸ್ಥಿತಿ ಇದ್ದು, ಬೆಳವಣಿಗೆ ಸಾಧ್ಯವಾಗ್ತಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಕಡಿಮೆ ಸಂಬಳ ಇರೋ ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಾಗುತ್ತಿದೆ. ಈ ಹಿಂದೆ ಬಂಡವಾಳ ಹೂಡಿಕೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿತ್ತು. ಆದ್ರೆ ಈಗ ಆತ್ಮಹತ್ಯೆ ವಿಚಾರದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ ಅಂದ್ರು. ಅಲ್ಲದೆ ಪಿಎಂಸಿ ಬ್ಯಾಂಕ್​​​​​​​​​​​ನ 16 ಲಕ್ಷ ಗ್ರಾಹಕರಿಗೆ ಪರಿಹಾರ ನೀಡುವತ್ತ ತಕ್ಷಣ ನಿರ್ಧಾರ ಕೈಗೊಳ್ಳಬೇಕು ಅಂದ್ರು.

 

Contact Us for Advertisement

Leave a Reply