ಜಮ್ಮು ಕಾಶ್ಮೀರ: ಜಿ20 ಸಭೆ ಹಿನ್ನೆಲೆಯಲ್ಲಿ ಭಿಗಿ ಭದ್ರತೆ ಹೆಚ್ಚಿಸದ ಪೊಲೀಸ್‌

masthmagaa.com:

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆಯಲಿರುವ ಜಿ20 ದೇಶಗಳ ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆಯ ಹಿನ್ನಲೆಯಲ್ಲಿ ಭಿಗಿ ಭದ್ರತೆ ಒದಗಿಸಲಾಗಿದೆ. ಸಭೆ ನಡೆಯುವ ಸ್ಥಳದ ಸುತ್ತ ಮುತ್ತಲೂ ಮೂರು ಹಂತದ ಭದ್ರತಾ ವ್ಯವಸ್ಥೆ ಪೂರೈಸಲಾಗಿದೆ. ಪೋಲೀಸರ ಜೊತೆಯಲ್ಲಿ BSF, CRPF ಮತ್ತು SSB ಅನ್ನ ನಿಯೋಜಿಸಲಾಗ್ತಿದೆ ಅಂತ ಪೊಲೀಸರು ಮಾಹಿತಿ ನೀಡಿದ್ದಾರೆ. ಅಂದ್ಹಾಗೆ ಮೇ 22ರಿಂದ 24ರವರೆಗೆ ಶ್ರೀನಗರದಲ್ಲಿ ಜಿ20 ರಾಷ್ಟ್ರಗಳು ಸೇರಿದಂತೆ ಸುಮಾರು 100 ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ. ಇನ್ನೊಂದ್‌ ಕಡೆ ಬೆಂಗಳೂರಿನಲ್ಲೂ ಮೇ 23ರಿಂದ 25ರವರೆಗೂ ಜಿ20 ಸಭೆ ನಡೆಯಲಿದೆ. ವ್ಯಾಪಾರ ಮತ್ತು ಹೂಡಿಕೆ ಕಾರ್ಯಕಾರಿ ಗುಂಪಿನ ಸಭೆಯಲ್ಲಿ ಜಿ20 ಸದಸ್ಯ ರಾಷ್ಟ್ರಗಳಿಂದ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಅಂತ ಮಾಹಿತಿ ಲಭ್ಯವಾಗಿದೆ.

-masthmagaa.com

Contact Us for Advertisement

Leave a Reply