masthmagaa.com:

ಕೊರೋನಾ ಹಾವಳಿಯಿಂದ ಬಂದ್ ಆಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿವಿಯ (RGUHS) ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳು ಇಂದಿನಿಂದ ಪುನಾರಂಭ ಆಗಿವೆ. ಆದ್ರೆ ಕೊರೋನಾ ಹಿನ್ನೆಲೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಕಾಲೇಜು ಪುನಾರಂಭ ಸಂಬಂಧ ಈಗಾಗಲೇ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಕಾಲೇಜು ಆಡಳಿತ ಮಂಡಳಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ರಾಜ್ಯದಲ್ಲಿ ನವೆಂಬರ್​ 17ರಿಂದ ಸ್ನಾತಕೋತ್ತರ ಮತ್ತು ಅಂತಿಮ ವರ್ಷದ ಪದವಿಪೂರ್ವ ಕಾಲೇಜುಗಳು ಆರಂಭವಾಗಿದ್ದವು. ಇದೀಗ RGUHS ಅಡಿಯಲ್ಲಿ ಬರುವ ಕಾಲೇಜುಗಳು ಕೂಡ ಆರಂಭ ಆಗಿವೆ.

-masthmagaa.com

Contact Us for Advertisement

Leave a Reply