ಕರ್ನಾಟಕ ಸೇರಿ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲಿ ಐಸಿಸ್ ಸಕ್ರಿಯ..!

masthmagaa.com:

ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಒಟ್ಟು 12 ರಾಜ್ಯಗಳಲ್ಲಿ ಐಸಿಸ್ ಉಗ್ರ ಸಂಘಟನೆ ಹೆಚ್ಚು ಸಕ್ರಿಯವಾಗಿದೆ ಅಂತ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ರಾಜ್ಯಸಭೆಗೆ ಲಿಖಿತ ಮಾಹಿತಿ ನೀಡಿದ್ದಾರೆ. ಎನ್​ಐಎ ತನಿಖೆ ವೇಳೆ ಈ ವಿಚಾರ ಗೊತ್ತಾಗಿದೆ. ಈ ಪಟ್ಟಿಯಲ್ಲಿ ಮಹಾರಾಷ್ಟ್ರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ, ಬಿಹಾರ, ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಜಮ್ಮು-ಕಾಶ್ಮೀರ ಕೂಡ ಸೇರಿದೆ.

ಕರ್ನಾಟಕ ಸೇರಿದಂತೆ ದಕ್ಷಿಣದ 5 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) 17 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಒಟ್ಟು 122 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಈ ರಾಜ್ಯಗಳಲ್ಲಿ ಕೆಲವರು ಐಸಿಸ್​ ಸಂಘಟನೆಗೆ ಸೇರಿರುವ ವಿಚಾರ ಕೇಂದ್ರ ಮತ್ತು ರಾಜ್ಯದ ಭದ್ರತಾ ಏಜೆನ್ಸಿಗಳ ಗಮನಕ್ಕೆ ಬಂದಿದೆ. ಇಂತಹ ಉಗ್ರರಿಗೆ ವಿದೇಶದಿಂದ ಹಣ ಹರಿದು ಬರ್ತಿದೆ. ಈ ನಿಟ್ಟಿನಲ್ಲಿ ಸೈಬರ್ ವಿಭಾಗ ಎಲ್ಲಾ ವ್ಯವಹಾರದ ಮೇಲೂ ಹದ್ದಿನ ಕಣ್ಣಿಟ್ಟಿದೆ ಅಂತ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply