ರಾಜ್ಯದ ಶಾಲೆಗಳಲ್ಲಿ ʻವಿಶೇಷ ಭೋಜನʼ ಕಾರ್ಯಕ್ರಮ!

masthmagaa.com:

ರಾಜ್ಯದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ʻವಿಶೇಷ ಭೋಜನ ಮತ್ತು ಶಾಲೆಗಾಗಿ ನಾವು ನೀವುʼ ಕಾರ್ಯಕ್ರಮವನ್ನ ಆಯೋಜಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ಲಭಿಸಲಿದೆ. ಇನ್ನು ಈ ಕಾರ್ಯಕ್ರಮದಡಿ ಟ್ರಸ್ಟ್, ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸೇರಿದಂತೆ ಸಮುದಾಯದವರು ಆರ್ಥಿಕ ನೆರವು ಹಾಗೂ ವಿಶೇಷ ಪೌಷ್ಠಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದು. ಈ ರೀತಿ ನೀಡುವ ಆಹಾರ ಸಂಪೂರ್ಣ ಸಸ್ಯಾಹಾರವಾಗಿರಬೇಕು. ಜೊತೆಗೆ ಇಲಾಖೆ ಗುರುತಿಸಿರುವ ಆಹಾರ ಪದಾರ್ಥಗಳ ಪಟ್ಟಿಯಲ್ಲಿರಬೇಕು ಅಂತ ಶಿಕ್ಷಣ ಇಲಾಖೆ ಆದೇಶಿಸಿದೆ.

-masthmagaa.com

Contact Us for Advertisement

Leave a Reply