ರಾಜ್ಯದಲ್ಲಿ ಮುಂದುವರೆದ ಮಾನ್ಸೂನ್‌ ಅಬ್ಬರ! ಮರಬಿದ್ದು ಓರ್ವ ಸಾವು!

masthmagaa.com:

ರಾಜ್ಯದಲ್ಲಿ ವರುಣನ ಅಬ್ಬರ ಕಂಟಿನ್ಯೂ ಆಗಿದ್ದು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಹಾಗು ಧಾರಾಕಾರ ಮಳೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಕಾರ್ಕಳ ಬೆಳ್ಮಣ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಬೃಹತ್ ಆಲದ ಮರ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲೂ ಮಳೆ ಮುಂದುವರೆದಿದ್ದು, ಭದ್ರಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಹೀಗಾಗಿ ನದಿ ದಡದ ಜಮೀನುಗಳು ಜಲಾವೃತವಾಗಿವೆ. ಇನ್ನು ಕಳಸ-ಕುದುರೆಮುಖ ಮುಖ್ಯ ರಸ್ತೆಯ ಬೇಡಕ್ಕಿ ಅನ್ನೋ ಬಳಿ ಬಿರುಕು ಕಾಣಿಸಿಕೊಂಡಿದ್ದು, ಕಳೆದ ವರ್ಷವೂ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು. ಮತ್ತೊಂದ್‌ ಕಡೆ ರಾಜಧಾನಿ ಬೆಂಗಳೂರಿನಲ್ಲಿ ಇಂದು ಯಶವಂತಪುರ, ಮೆಜೆಸ್ಟಿಕ್, ಕುರುಬರಹಳ್ಳಿ, ರಾಜಾಜಿನಗರ, ಎಂಜಿ ರೋಡ್, ರೇಸ್ ಕೋಸ್೯ ರಸ್ತೆ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಇನ್ನೂ 3 ರಿಂದ 4 ದಿನ ನಗರದಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಸೂಚನೆ ನೀಡಿದೆ. ಆದ್ರೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳು ಕಡಿಮೆಯಿದ್ದು, ಜುಲೈ 8 ರಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಇಳಿಮುಖವಾಗಲಿದೆ ಅಂತ ಹವಾಮಾನ ತಜ್ಞರು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply