ರಾಜ್ಯದಲ್ಲಿ ಮುಂಗಾರು ಚುರುಕು: ಹಲವು ಕಡೆ ಎಲ್ಲೋ ಅಲರ್ಟ್!‌

masthmagaa.com:

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ವರುಣ ಅಬ್ಬರಿಸೋಕೆ ಶುರುಮಾಡಿದ್ದಾನೆ. ನಿನ್ನೆಯೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ನಿರೀಕ್ಷೆ ಇದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಬೀದರ್‌ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ರಾಜ್ಯದ ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು ಮೇಲ್ಮೈ ಸುಳಿಗಾಳಿ 60 ಕಿಲೋಮೀಟರ್‌ ವೇಗದಲ್ಲಿ ಚಲಿಸುವ ಸಾಧ್ಯತೆ ಇದ್ದು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

-masthmagaa.com

Contact Us for Advertisement

Leave a Reply